ಮಂಗಳೂರು, ನ. 18: ನೇಜಾರಿನ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕೆಲಸದಿಂದ ಅಮಾನತುಗೊಳಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವಕ್ತಾರರು  ‘ಘಟನೆಯಿಂದ ನಮಗೆ ತೀವ್ರ ದು:ಖವಾಗಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡುತ್ತೇವೆ ಮತ್ತು ತನಿಖೆಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ನಾವು ಆರೋಪಿಯನ್ನು ತಕ್ಷಣದಿಂದ ಜಾರಿಯಾಗುವಂತೆ ಕೆಲಸದಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.