ಬೆಂಗಳೂರು: ಕಾಂಗ್ರೆಸ್ ತ್ಯಜಿಸಿ, ಜೆಡಿಎಸ್‌ ಸೇರಿದ್ದ ರಾಜಗೋಪಾಲರೆಡ್ಡಿ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣಕ್ಕೆ ರಾಜಗೋಪಾಲರೆಡ್ಡಿ ಜೆಡಿಎಸ್ ಸೇರಿದ್ದರು. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು  ಜೆಡಿಎಸ್ ಮುಖಂಡ ರಾಜಗೋಪಾಲರೆಡ್ಡಿ ಅವರ ಎಲೆಕ್ಟ್ರಾನಿಕ್ ಸಿಟಿಯ ಹುಲಿಮಂಗಲ ನಿವಾಸಕ್ಕೆ ರವಿವಾರ ತೆರಳಿ ರಾಜಗೋಪಾಲರೆಡ್ಡಿ, ಅವರ ಪತ್ನಿ ಸುಷ್ಮಾ ರೆಡ್ಡಿ, ಪುತ್ರಿ ದೀಪಿಕಾ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.  