ಇಂಧನ ಸಚಿವ ಕೆ.ಜೆ.ಜಾರ್ಜ್ ಬೆಂಗಳೂರು, ನ. 10: ಇಂಧನ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ‘ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ’ಯಲ್ಲಿ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ನಾಲ್ವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮ ನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ.ಆರ್.ಲೋಬೋ, ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿ’ಸೋಜಾ, ವಿಧಾನಸಭೆಯ ಮಾಜಿ ನಾಮ ನಿರ್ದೇಶಿತ ಸದಸ್ಯೆ ವಿನಿಶಾ ನಿರೋ ಹಾಗೂ ವಿಧಾನಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಯೋನ್ ಅವರನ್ನು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ. 