ಮಂಡ್ಯ, .ನ.10: ಟಿಪ್ಪು ಸುಲ್ತಾನ್  ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು (ಶುಕ್ರವಾರ) ನಿಷೇಧಾಜ್ಞೆ ಜಾರಿ ಮಾಡಲಾಗಿದೆ.'ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ , ಯಾವುದೇ ಘೋಷಣೆ ಕೂಗದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇಂದು ಬೆಳಗ್ಗೆ 6ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ' ಎಂದು ತಾಲೂಕು ಆಡಳಿತ ತಿಳಿಸಿದೆ.'ಟಿಪ್ಪು ವಕ್ಫ್​ ಎಸ್ಟೇಟ್'  ಇಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. 