PC: fb.comಬೆಂಗಳೂರು: ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕ್ಷಮೆ ಯಾಚಿಸಿದ್ದಾರೆ.ಇತ್ತೀಚೆಗೆ ಅರಮನೆ ಮೈದಾನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಬೆಲ್ಲದ್‌,  ಜಿಂದಾಲ್ ಗೆ ಕಡಿಮೆ ದರದಲ್ಲಿ ಭೂಮಿ ನೀಡಿರುವ ಸಂಬಂಧವಾಗಿ ಪ್ರತಿಕ್ರಿಯಿಸಿ ʼಸಿದ್ದರಾಮಯ್ಯನವರದ್ದು ಏನು ಅಪ್ಪನ‌ ಮನೆ ಆಸ್ತಿನಾʼ ಎಂಬ ಪದ ಬಳಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬೆಲ್ಲದ್ ಆ ಮೂಲಕ ಕ್ಷಮೆಯಾಚಿಸಿದ್ದಾರೆ. 