ಬೆಂಗಳೂರು, ನ.4: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರಿಬ್ಬನ್ ಕತ್ತರಿಸಲು ಕತ್ತರಿ ಕೊಟ್ಟು ಉದ್ಘಾಟನೆ ಮಾಡಿಸಿದರು.ಈ ಸಂದರ್ಭದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ, ಸಚಿವರಾದ ಕೆ ಎನ್ ರಾಜಣ್ಣ, ಎಂ ಬಿ ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಇದ್ದರು. 