ಬೆಂಗಳೂರು, ನ. 1: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2023-24ನೆ ಸಾಲಿನಲ್ಲಿ ಎಂಫಿಲ್ ಮತ್ತು ಪಿಎಚ್‍ಡಿ ಕೋರ್ಸ್‍ಗಳಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಎಂಫಿಲ್ ಮತ್ತು ಪಿಎಚ್.ಡಿ ಫೆಲೋಶಿಫ್ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ನ.15ರ ವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.ಈ ಹಿಂದೆ ಇಲಾಖೆಯು ಅಕ್ಟೋಬರ್ 31 ರವರೆಗೆ ಅರ್ಜಿ ಹಾಕಲು ಅವಕಾಶ ನೀಡಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಣೆ ಮಾಡಿ, ನ.15ರ ವರೆಗೆ ಕಾಲಾವಕಾಶ ನೀಡಿದೆ.ಅರ್ಹತೆಗಳು  ಅಲ್ಪಸಂಖ್ಯಾತರ ನಿರ್ದೇಶನಾಲಯದ ಪಿಹೆಚ್‌ಡಿ, ಎಂ.ಫಿಲ್ ಫೆಲೋಶಿಪ್‌ಗೆ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸುವ ವಿಧಾನ  - ವೆಬ್‌ ವಿಳಾಸ https://sevasindhu.karnataka.gov.in/ ಗೆ ಭೇಟಿ ನೀಡಿ.  - ತೆರೆದ ಮುಖಪುಟದಲ್ಲಿ 'New Users Register Here' ಎಂದಿರುವಲ್ಲಿ ಕ್ಲಿಕ್ ಮಾಡಿ.  - ನಂತರ ಓಪನ್ ಆಗುವ ಪೇಜ್‌ನಲ್ಲಿ ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.