ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್​.ಚಲುವರಾಯಸ್ವಾಮಿ, ಶಾಸಕ ರಿಝ್ವಾನ್ ಅರ್ಷದ್, ಆರ್​. ವಿ.ದೇಶಪಾಂಡೆ​ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.