ಬೆಂಗಳೂರು: ಪೊಲೀಸ್‌ ಅಧಿಕಾರಿಯೊಬ್ಬರಿಗೆ ನಿಂದಿಸಿರುವ ಆರೋಪದಲ್ಲಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ನಗರದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದ್ಯದ ಅಮಲಿನಲ್ಲಿ ಅಸಭ್ಯ ವರ್ತನೆ ಪ್ರದರ್ಶಿಸಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದಲ್ಲದೇ, ಅಧಿಕಾರಿಯೊಬ್ಬರಿಗೆ ʼಪೊಲೀಸ್ ಅಧಿಕಾರಿ ಮುಸ್ಲಿಂʼ ಎಂದು ಧರ್ಮವನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಆ್ಯಡಂ ಬಿದ್ದಪ್ಪ ವಿರುದ್ಧ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ಧರ್ಮ ನಿಂದನೆ ಪ್ರಕರಣ ದಾಖಲಿಸಲಾಗಿದೆ.ಘಟನೆ ವವರ: ಅ.25ರ ರಾತ್ರಿ ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ಬಳಿ ಆ್ಯಡಂ ಬಿದ್ದಪ್ಪ ಅವರು ಅಪಾಯಕಾರಿಯಾಗಿ ಕಾರು ಚಲಾಯಿಸಿಕೊಂಡು ಬಂದು ರಾಹುಲ್ ಎಂಬಾತನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರ ಜತೆಗೂ ಕೂಡ ಬಿದ್ದಪ್ಪ ವಾಗ್ವಾದ ನಡೆಸಿದ್ದಾನೆ. -‌ ವೀಡಿಯೊ ವೈರಲ್ಆರೋಪಿ ಆ್ಯಡಂ ಬಿದ್ದಪ್ಪ ಪೊಲೀಸರ ಜತೆ ವಾಗ್ವಾದ ನಡೆಸುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಅಧಿಕಾರಿಯೊಬ್ಬರು ಕಾರು ಚಲಾಯಿಸುತ್ತಿದ್ದ ಆರೋಪಿ (ಆ್ಯಡಂ) ಬಳಿಗೆ ಬಂದು ಪ್ರಶ್ನಿಸಿದಾಗ, ಆ್ಯಡಂ ಬಿದ್ದಪ್ಪ ಅಧಿಕಾರಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಈ ವೇಳೆ ಆರೋಪಿಯು, ‘ಘೌಸ್, ಘೌಸ್ ಪಾಷಾ, ಒಬ್ಬ ಮುಸ್ಲಿಮ್’ ಎನ್ನುತ್ತಾ ಪೋಲೀಸರ ಮೇಲೆ ಉಗುಳುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಆಲ್ಟ್‌ ನ್ಯೂಸ್‌ ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹಲವರು ಚಾಲಕ ಆ್ಯಡಂ ಬಿದ್ದಪ್ಪನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಗೆ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೌಸ್ ಪಾಷಾ ಆ್ಯಡಂ ವಿರುದ್ಧ ದೂರು ನೀಡಿದ್ದಾರೆ. ವೈರಲ್ ಆಗಿರುವ ವೀಡಿಯೊ ಇಲ್ಲಿದೆ...Prasad Bidapa's son Adam Bidapa abuses Bengaluru Cop for being Muslim in drunken road rage. pic.twitter.com/RtLcHaGFLS 