ಚಿಕ್ಕಮಗಳೂರು: ಹುಲಿ ಉಗುರು ಇದ್ದ ಡಾಲರ್ ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಾಳೆಹೊನ್ನೂರು ಸಮೀಪದ ಖಾಂಡ್ಯ ಮಾರ್ಕಂಡೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಎಂಬುವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.ಗುರುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಾಳೆಹೊನ್ನೂರು ಅರಣ್ಯ ಇಲಾಖೆ ಅಧಿಕಾರಿಗಳು ಮೂರು ಹುಲಿ ಉಗುರುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಚಿಕ್ಕಮಗಳೂರು ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.  ಬಂಧಿತರಿಂದ ಅಧಿಕಾರಿಗಳು ಮೂರು ಹುಲಿ ಉಗುರುಗಳನ್ನು ವಶಪಡಿಸಿಕೊಂಡಿದ್ದರು. 