ಬೆಂಗಳೂರು, ಅ. 26: ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮ, ರಾಜ್ಯ‌ ಪೊಲೀಸ್‌ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ‌ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.  