ಬೆಂಗಳೂರು: ಕರ್ನಾಟಕ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ವಿ.ಅರವಿಂದ ಅವರು ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.ರಾಜಭವನದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.   ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಸೇರಿದಂತೆ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಮಾರಂಭದ ಸ್ವಾಗತವನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನೆರವೇರಿಸಿದರು.  