ಪವಿತ್ರಾ ಗೌಡ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಎ1 ಆರೋಪಿ ಪವಿತ್ರಾ ಗೌಡ  ಹಾಗೂ ಎ7 ಆರೋಪಿ ಅನ್ಬುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.ಪವಿತ್ರಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸಿಟಿ ಸಿವಿಲ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.ಪವಿತ್ರಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು.