 ಬೆಂಗಳೂರು, ಅ.21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು  ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ಶುಕ್ರವಾರರಂದು ತಪಾಸಣೆ ನಡೆಸಲಾಗಿದ್ದು, ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಯಿತು.ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ‌ ಇಂದು 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 12 ಉದ್ದಿಮೆಗಳನ್ನು ಮುಚ್ಚಲಾಯಿತು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.