ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಜತೆಗಿದ್ದರು.ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಮೊಣಕಾಲಿನ ಶಸ್ತ್ರ ಚಿಕಿತ್ಸೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.  