ಬೆಂಗಳೂರು: ಮುಖ್ಯಮಂತ್ರಿ  ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆಸ್ಟ್ರೇಲಿಯಾ - ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಿದ್ದಾರೆ. ಸಿಎಂ, ಡಿಸಿಎಂ ಜೊತೆಗೆ ವಿಐಪಿ ವಿಂಗ್‌ನಲ್ಲಿ ಕುಳಿತು ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಕ್ರಿಕೆಟ್‌ ವೀಕ್ಷಣೆ ಮಾಡಿದ್ದಾರೆ. 2023 ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಬೆಂಗಳೂರಿನಲ್ಲಿ ಒಟ್ಟು 5 ಪಂದ್ಯಗಳು ನಿಗದಿಯಾಗಿದ್ದು,  ಇಂದು ಆಸ್ಟ್ರೇಲಿಯಾ - ಪಾಕಿಸ್ತಾನ ನಡುವೆ ಪಂದ್ಯ ನಡೆದಿದೆ.     