ಬೆಂಗಳೂರು: ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ. ʼಅಪಪ್ರಚಾರಕ್ಕೆ ಕಿವಿಗೊಡಬಾರದುʼʼʼವಿಧಾನಸೌಧ ಮತ್ತು ವಿಕಾಸಸೌಧ ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದುʼʼ ಎಂದು ಅವರು ಮನವಿ ಮಾಡಿದ್ದಾರೆ.    