ಸಾಂದರ್ಭಿಕ ಚಿತ್ರ ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಚುರುಕು ಪಡೆದುಕೊಳ್ಳುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಲಿದ್ದು, ಈ 4 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.   ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರಲಿದೆ. ಪರಿಣಾಮ ತಾಪಮಾನ ಏರಿಕೆಯಾಗುತ್ತಿದೆ. ಆದರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನ ಕೆಲ ಭಾಗಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯ ಮಳೆಯಾಗುವ ಲಕ್ಷಣವಿದೆ.  