ಬೆಳಗಾವಿ: ಇಲ್ಲಿನ ಘಟಪ್ರಭಾ ಪಟ್ಟಣದ ಮೃತ್ಯುಂಜಯ ವೃತ್ತದ ಬಳಿ ಮಹಿಳೆಯೊಬ್ಬರಿಗೆ ಗುಂಪೊಂದು ಚಪ್ಪಲಿ ಹಾರ ಹಾಕಿ, ಮೆರವಣಿಗೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ  10ಕ್ಕೂ ಹೆಚ್ಚು ಮಂದಿಯ ವಿರುದ್ಧ ದೂರು ದಾಖಲಾಗಿವುದು ವರದಿಯಾಗಿದೆ. ಶುಕ್ರವಾರ ರಾತ್ರಿ ರಾತ್ರಿ 9ರ ಸುಮಾರಿಗೆ ಇಲ್ಲಿನ ಮೃತ್ಯುಂಜಯ ಸರ್ಕಲ್‌ನಲ್ಲಿ ಸೇರಿದ ಕೆಲವು ಮಹಿಳೆಯರು ಹಾಗೂ ಪುರುಷರ ಗುಂಪು ಹಣದ ವಿಚಾರವಾಗಿ, ಶ್ರೀದೇವಿ ಎಂಬ ಮಹಿಳೆಯನ್ನು ತರಾಟೆ ತೆಗೆದುಕೊಂಡಿದೆ. ಆ ಬಳಿಕ ಚಪ್ಪಲಿ, ಬೂಟುಗಳನ್ನು ಕಟ್ಟಿ ಹಾರ ಮಾಡಿ ಕೊರಳಿಗೆ ಹಾಕಿ ರಸ್ತೆ ಮಧ್ಯೆ ಮೆರವಣಿಗೆ ಮಾಡಿದ್ದಾರೆ.  ಈ ಅಮಾನವೀಯ ಘಟನೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.ಹಲ್ಲೆಗೆ ಒಳಗಾದ ಮಹಿಳೆ ಘಟಪ್ರಭಾ ಠಾಣೆಗೆ ನೀಡಿದ ದೂರಿನ ಅನ್ವಯ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.  