ಅಪಘಾತಕ್ಕೀಡಾದ ಒಮ್ನಿ ಕಾರುರಾಮನಗರ: ಕಾರೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಪೇಗೌಡನದೊಡ್ಡಿ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬಳಗ್ಗೆ ವರದಿಯಾಗಿದೆ.  ರಾಜೇಶ್ (42), ಉಮಾ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಓವರ್ ಟೇಕ್​ ಮಾಡುವ ಭರದಲ್ಲಿ ಒಮ್ನಿ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಮಕ್ಕಳು ಸೇರಿ ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 