ಸಾಂದರ್ಭಿಕ ಚಿತ್ರಬೆಂಗಳೂರು, ಅ. 12: ತೆರಿಗೆ ವಂಚನೆ ಸಂಬಂಧ ನಗರದ 10ಕ್ಕೂ ಹೆಚ್ಚು ಕಡೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.  ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.