ಚಿಕ್ಕಣ್ಣ(facebook)ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಪರಿಗಣಿಸಿರುವ ನಟ ಚಿಕ್ಕಣ್ಣ ಅವರು ಬಸವೇಶ್ವರನಗರ ಠಾಣೆಯ ಕಟ್ಟಡದಲ್ಲಿರುವ ವಿಜಯನಗರದ ಎಸಿಪಿ ಚಂದನ್ ಅವರ ಕಚೇರಿಯಲ್ಲಿ ಗುರುವಾರ 2ನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.  ರೇಣುಕಾಸ್ವಾಮಿ ಕೊಲೆಗೂ ಮೊದಲು ನಗರದ ಸ್ಟೋನಿಬ್ರೂಕ್ ರೆಸ್ಟೋರೆಂಟ್‍ನಲ್ಲಿ ಆರೋಪಿ ದರ್ಶನ್ ಅವರೊಂದಿಗೆ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು. ಹಾಗಾಗಿ ಚಿಕ್ಕಣ್ಣ ಅವರನ್ನು ವಿಚಾರಣೆಗೊಳಪಡಿಸಿ ತನಿಖಾಧಿಕಾರಿ ಮಾಹಿತಿ ಪಡೆದುಕೊಂಡು ಸಾಕ್ಷಿಯಾಗಿ ಪರಿಗಣಿಸಿದ್ದಾರೆ.  ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಅವರನ್ನು ಚಿಕ್ಕಣ್ಣ ಭೇಟಿ ಮಾಡಿದ್ದರು. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.  ವಿಚಾರಣೆ ಬಳಿಕ ಠಾಣೆಯಿಂದ ಹೊರಬಂದ ಚಿಕ್ಕಣ್ಣ ಸುದ್ದಿಗಾರರೊಂದಿಗೆ ಮಾತನಾಡಿ, ಈ ಪ್ರಕರಣದಲ್ಲಿ ನನ್ನನ್ನು ಸಾಕ್ಷಿಯಾಗಿ ಮಾಡಿದ್ದಾರೆ. ಪೊಲೀಸರ ವಿಚಾರಣೆಗೆ ಸಹಕರಿಸಿದ್ದೇನೆ. ಎಲ್ಲವನ್ನೂ ಮಾಧ್ಯಮಗಳ ಎದುರು ಬಹಿರಂಗಪಡಿಸುವಂತಿಲ್ಲ ಎಂದರು.  