ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಹಾಗೂ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದ ಇಬ್ಬರು ನಾಯಕರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದರು.ʼʼನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ.  ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆʼʼ ಎಂದು ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಈ ಹಿಂದೆ ತಿಳಿಸಿದ್ದರು. ಇನ್ನು ಹಿರಿಯೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಸಹ ಕಾಂಗ್ರೆಸ್ ಸೇರುವುದು ಖಚಿತಗೊಂಡಿದೆ. ಅವರು ಅಕ್ಟೋಬರ್‌ 20 ರಂದು ಕಾಂಗ್ರೆಸ್‌ ಸೇರವುದಾಗಿ ಗೋಷಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕರಾದ ಮೂಡಿಗೆರೆಯ ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಇಂದು ನನ್ನನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದರು. pic.twitter.com/8XFWDOM0aw 