ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮೇಲೆ ಕಲ್ಲು ತೂರಿದ ಘಟನೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿ ಮಂಗಳವಾರ ಬೆಳಗ್ಗೆ ವರದಿಯಾಗಿದೆ. ಬೆಳಗ್ಗೆ 8 ಗಂಟೆಯ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಇದರಿಂದ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿವೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸತ್ಯಮೂರ್ತಿಯನ್ನು ವಶಕ್ಕೆ ಪಡೆಯಲಾಗಿದೆ.ಇದೇ ವ್ಯಕ್ತಿ ಕಳೆದ ವಿಧಾನಸಭೆ ಚುನಾವಣೆ ಮತದಾನದ ದಿನ ಮತಗಟ್ಟೆ ಒಂದರಲ್ಲಿ ಇವಿಎಂ ಒಡೆದು ಹಾಕಿದ್ದು, ವೀಡಿಯೊ ಹರಿದಾಡಿತ್ತು. ಪ್ರಕರಣ ಸಹ ದಾಖಲಾಗಿತ್ತು.