ಬೆಂಗಳೂರು: ಹಿರಿಯೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರುವುದು ಖಚಿತಗೊಂಡಿದೆ.ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದು, ಅ.20 ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.   ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.  