ಬೆಂಗಳೂರು, ಅ.8: ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.      