ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ  ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಂಗಡಿ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎನ್ನಲಾಗಿದೆ..