PC: fb.comಬೆಂಗಳೂರು: ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆ, ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ.ನಗರದ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಸಂಸದ ಬಸವರಾಜ್​ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಾಣಿ.ಎ. ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಹಾಕಿರುವ ಕಾಂಗ್ರೆಸ್‌, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಈ ತಡೆಯಾಜ್ಞೆಗೆ ಕೆ. ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.