ಶಿವಮೊಗ್ಗ: ಶುಕ್ರವಾರ ಇಲ್ಲಿನ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಸಂಘ ಪರಿವಾರದ ಮುಖಂಡ ಅರುಣ್​ಕುಮಾರ್ ಪುತ್ತಿಲ, ನಿಷೇಧಾಜ್ಞೆ ನಡುವೆ ಪ್ರಚೋದನಕಾರಿ‌ ಹೇಳಿಕೆ ನೀಡಿದ ಆರೋಪದಡಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,ʼʼರಾಗಿಗುಡ್ಡದಲ್ಲಿ ಮುಸ್ಲಿಂ ಸಮುದಾಯದಿಂದ ಘಟನೆ ನಡೆದಿದೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂಡ್ರೈವರ್, ಸ್ಪಾನರ್ ಕೈ ಬಿಡಿ ತಲ್ವಾರ್ ಗಳಿಗೆ ಪೂಜೆ ಮಾಡಿʼʼ ಎಂದು ಪ್ರಚೋದನಕಾರಿ‌ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಐಪಿಸಿ ಸೆಕ್ಷನ್ 153 A ಕಾಯ್ದೆಯಡಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.