ಚಿತ್ರದರ್ಗ, ಅ.06: ʼರಾಜ್ಯದಲ್ಲಿ ಯಾವುದೇ ಹೊಸ ಮದ್ಯದಂಗಡಿಗನ್ನು ತೆರೆಯುವುದಿಲ್ಲʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ  ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ  ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲʼʼ ಎಂದು ಹೇಳಿದರು.ʼʼಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲʼʼಗ್ಯಾರಂಟಿಗಳಿಗಾಗಿ ರಾಜ್ಯದ  ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ʼʼರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು  ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ.  ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆʼ ಎಂದರು. 