ಮೈಸೂರು,ಅ.6: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.ಈ ಸಂಬಂಧ ಏರ್ ಶೋ ನಡೆಸಲು  ಕೇಂದ್ರ ಸರಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಶುಕ್ತವಾರ  ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ನ್ ಡಿ.ಕೆ.ಓಜಾ  ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ  ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು. 