 ಎಸ್ಪಿ ಮಿಥುನ್‌ ಕುಮಾರ್‌ಶಿವಮೊಗ್ಗ: ರಾಗಿಗುಡ್ಡದಲ್ಲಿ ಕಲ್ಲು ತೂರಾಟ  ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.ಮಾಧ್ಯಮ ಪ್ರಕಟನೆ ನೀಡಿರುವ ಅವರು,  ಘಟನೆಯಲ್ಲಿ ಒಂದು ಕಾರು, ಆಟೋ, ಎರಡು ಬೈಕುಗಳಿಗೆ ಹಾನಿಯಾಗಿದೆ. 7 ಮನೆಗಳ ಮೇಲೆ ಕಲ್ಲು ತೂರಾಟವಾಗಿತ್ತು. ಅರ್ಧ ಗಂಟೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಶಿವಮೊಗ್ಗ ನಗರದ ಉಳಿದ ಯಾವ ಭಾಗದಲ್ಲಿಯು ಸಮಸ್ಯೆಯಾಗಿಲ್ಲ ಎಂದು ತಿಳಿಸಿದ್ದಾರೆ.ʼʼಧಗ ಧಗ, ಕೊತ ಕೊತ ಇಲ್ಲʼʼʼʼಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಯಾವುದೆ ಧಗ ಧಗ, ಕೊತ ಕೊತ ಇಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅತ್ಯವಿಲ್ಲʼʼ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.