ವಿನೋದ್ ಮಂಡ್ಯ, ಅ.2: ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಾಲ್ವರು ದುಷ್ಕರ್ಮಿಗಳು ರೌಡಿ ಶೀಟರ್ ಒಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.ವಿನೋದ್ ಆಲಿಯಾಸ್ ಕುಂಟ ವಿನು (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದುಬಂದಿದ್ದು, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.ಮಾರುತಿ ಓಮಿನಿ ವಾಹನದಲ್ಲ ಬಂದ ನಾಲ್ವರು ದುಷ್ಕರ್ಮಿಗಳು, ಸ್ಕೂಟರ್‍ಗೆ ಢಿಕ್ಕಿ ಹೊಡೆದು ವಿನೋದನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದರೆನ್ನಲಾಗಿದೆ.ಶ್ರೀರಂಗಪಟ್ಟಣ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.