ಬೆಂಗಳೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್​ ಕಾರಿನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜೆ.ಪಿ ನಗರ ಸಮೀಪ ವರದಿಯಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೆ.ಪಿ ನಗರದಲ್ಲಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ದೃಶ್ಯವು ಮೊಬೈಲ್‌ ನಲ್ಲಿ ಸೆರೆಯಾಗಿದೆ.  