ಫೋಟೊ - twitter.comಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್​ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ.ಸ್ಯಾಂಡಲ್​ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್​ ನೀಡಿದರು.ಬೆಂಗಳೂರಿನ ಕರ್ನಾಟಕದ ಫಿಲ್ಮ್​ ಚೇಂಬರ್ ಸಮೀಪ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಚಿತ್ರರಂಗ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಚಿತ್ರರಂಗದ ಹಲವು ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಉಪೇಂದ್ರ, ಶಿವರಾಜ್​ಕುಮಾರ್, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಉಮಾಶ್ರೀ ಮೊದಲಾದವರು ಭಾಗಿ ಆಗಿದ್ದರು. ಈ ವೇಳೆ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.