ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಬಂದಿದ್ದ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಮುತ್ತಿಗೆ ಹಾಕಲು ಯತ್ನಿಸಿದ ಸುಮಾರು 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇನ್ನು ʼಕರ್ನಾಟಕ ಬಂದ್‌ʼ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸರು, ಹಲವು ಸಂಘಟನೆಗಳ ಹೋರಾಟಗಾರರಿಗೆ ಗುರುವಾರ ಎಚ್ಚರಿಕೆಯ ನೋಟಿಸ್ ನೀಡಿದ್ದಾರೆ.  