ಬೆಂಗಳೂರು ನಗರ ಜಿಲ್ಲೆ, ಸೆ, 25: ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ  ವಿವಿಧ ಸಂಘಟನೆಗಳು ಸೆಪ್ಟೆಂಬರ್  26 ರಂದು  “ಬೆಂಗಳೂರು ಬಂದ್”  ಘೋಷಿಸಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 