ಸಂಗ್ರಹ ಚಿತ್ರಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಜತೆ ಮೈತ್ರಿ ಮಾಡುಕೊಳ್ಳುವ ಕುರಿತು ಚರ್ಚೆ ನಡೆಸಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ಪಕ್ಷದ ಹೈಕಮಾಂಡ್‍ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡಲಿರುವ ಎಚ್.ಡಿಕೆ, ಬಿಜೆಪಿ ಜೊತೆ ಸೀಟು ಹಂಚಿಕೆ ಕುರಿತು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ. ಈಗಾಗಲೇ 1 ಸುತ್ತಿನ ಮಾತುಕತೆಯನ್ನು ದೇವೆಗೌಡರು ಮುಗಿಸಿದ್ದಾರೆ. ಕೆಲವು ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ನಾಯಕರು ಕೂಡ ಒಪ್ಪಿದ್ದಾರೆ ಎನ್ನಲಾಗಿದೆ. 