ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ‌ ಹಾಗೂ ಪತ್ನಿಯ ತಾಯಿಯ ಕೊಲೆ‌ಗೈದಿರುವ ಘಟನೆ ವಿಜಯಪುರ ನಗರದ ನವಬಾಗ್‌ದಲ್ಲಿ ಸೋಮವಾರ ಬೆಳಗ್ಗೆ ವರದಿಯಾಗಿದೆ. ರೂಪಾ ಮೇತ್ರಿ (32)  ಅವರ ತಾಯಿ ಕಲ್ಲವ್ವ  (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆಗೈದಿರುವ ಆರೋಪಿಯಾಗಿದ್ದಾನೆ. ಆರೋಪಿಯು ಕಟ್ಟಿಗೆಯಿಂದ ತಲೆಗೆ ಹೊಡೆದು ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಕೊಲೆಗೈದ ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಮಲ್ಲಿಕಾರ್ಜುನ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.