ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ತುರ್ತು ಸಭೆ ನಡೆಸಿ ಚರ್ಚಿಸಿದರು.ಸಭೆಯಲ್ಲಿ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸರ್ವಪಕ್ಷದ ಮುಖಂಡರುಗಳು ಹಾಗೂ ಸಂಸತ್‌ ಸದಸ್ಯರು, ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಉಪಸ್ಥಿತರಿದ್ದರು. 