Photo - Twitter@anilkumble1074ಬೆಂಗಳೂರು, ಸೆ.11: ಹಲವು ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ, ಸೆ.11ರ ಮಧ್ಯರಾತ್ರಿ 12 ಗಂಟೆಯಿಂದಲೇ ಆಟೋ, ಟ್ಯಾಕ್ಸಿ, ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಅಲ್ಲದೇ, ವಿಮಾನ ನಿಲ್ದಾಣದ ಟ್ಯಾಕ್ಸಿ ಚಾಲಕರು ಸಹ ಬಂದ್ ಬೆಂಬಲಿಸಿದ್ದಾರೆ.ಈ ನಡುವೆ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್​ನಲ್ಲಿ ಮನೆ ಕಡೆ ಪ್ರಯಾಣ ಬೆಳೆಸಿರುವ ಫೋಟೊ ವೈರಲ್‌ ಆಗುತ್ತಿದೆ. ಅನಿಲ್‌ ಕುಂಬ್ಳೆ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೊ ಹಂಚಿಕೊಂಡಿದ್ದು, ''ವಿಮಾನ ನಿಲ್ದಾಣದಿಂದ ಮನೆಗೆ ಬಿಎಂಟಿಸಿ ಬಸ್‌ ನಲ್ಲಿ ಪ್ರುಯಾಣ.'' ಎಂದು ಬರೆದುಕೊಂಡಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆಬಂದ್‍ನಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ಮುನ್ನೆಚರಿಕೆ ಕ್ರಮ ಕೈಕೊಂಡಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಟ್ರಿಪ್ ಮಾಡಲು ಚಾಲಕರಿಗೆ ಸೂಚಿಸಲಾಗಿದೆ. 