ಬೆಂಗಳೂರು: 'ಕಾಂಗ್ರೆಸ್ ಸೇರುವ ಬಗ್ಗೆ ತಾವು ಒಂದು ಸೆಕೆಂಡ್ ಕೂಡ ಆಲೋಚಿಸಿಲ್ಲ' ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಬಿಜೆಪಿಯಲ್ಲಿನ ಅಸ್ಥಿರತೆಯನ್ನು ಹೋಗಲಾಡಿಸಲು ಈ ಕ್ರಮಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿರಬಹುದು. ಮೈತ್ರಿಯ ಬಗ್ಗೆ ನನಗೆ ಹೆಚ್ಚು ಮಾಹಿತಿಯಿಲ್ಲʼʼ ಎಂದು ಹೇಳಿದರು. ʼʼಲೋಕಸಭೆಗೆ ಸ್ಪರ್ಧಿಸುವ ಕುರಿತು ಇನ್ನೂ ಯೋಚನೆ ಮಾಡಿಲ್ಲ. ಹಲವು ವಿಚಾರಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇ‌ನೆ. ಅದನ್ನೆಲ್ಲಾ ಸರಿಪಡಿಸುವ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಹೈಕಮಾಂಡ್​ ಸರಿಪಡಿಸದಿದ್ದರೂ ನನಗೆ ಯಾವುದೇ ನಷ್ಟ ಇಲ್ಲʼʼ ಎಂದು ಸೋಮಣ್ಣ ತಿಳಿಸಿದರು. 