ಬೆಂಗಳೂರು, ಸೆ.8:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಲೋಕಸಭಾ ಚುನಾವಣೆಗೆ ನಾಲ್ಕು ಸೀಟುಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದರು.ನಾವು ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಸಿದ್ದರಾಮಯ್ಯ ನುಡಿದರು. ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.