ಶಿವಮೊಗ್ಗ, ಸೆ.07: ಕಾರುಗಳು ಮುಖಾಮುಖಿ ಢಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಾವಳ್ಳಿ ಸಮೀಪ  ಗುರುವಾರ ವರದಿಯಾಗಿದೆ. ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರು ಚನ್ನಗಿರಿ ಕಡೆ ತೆರಳುತ್ತಿದ್ದ ಕರಿನ ನಡುವೆ ಮುಖಿಮುಖಿ ಢಿಕ್ಕಿಯಾಗಿವೆ. ಘಟನೆಯಲ್ಲಿ ಇಲಿಯಾಸ್ ನಗರದ ಅಫ್ತಾಬ್ ಬಾಷ (40), ಮದೀಹ (12) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರೆಲ್ಲ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಗಾಯಾಳುಗಳುನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.