ಬೆಂಗಳೂರು, ಸೆ.6: ಬೆಂಗಳೂರಿನ ಮಲ್ಲೇಶ್ವರಂ 15ನೆ ಅಡ್ಡರಸ್ತೆಯ ಸಮೀಪ ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ, ದೇಶದಲ್ಲಿಯೆ ಮೊದಲ ಭೂಗತ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಉದ್ಘಾಟಿಸಿದರು.'ದೇಶದ ಮೊದಲ 500 ಕಿಲೋ ವ್ಯಾಟ್ ಭೂಗತ ಟ್ರಾನ್ಸ್ಫಾರ್ಮರ್ ಸ್ಥಾಪನೆಯಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಮರ್ಥನೀಯ, ಶಕ್ತಿ-ಸಮರ್ಥ ಭವಿಷ್ಯಕ್ಕೆ ಉಪಯುಕ್ತ' ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.   ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕ ದರ್ಶನ್.ಜೆ, ತಾಂತ್ರಿಕ ನಿರ್ದೇಶಕ ರಮೇಶ್ ಎಚ್.ಜೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಲಯ ಆಯುಕ್ತ ಡಾ.ದೀಪಕ್, ಬೆಸ್ಕಾಂ ಹಾಗೂ ಬಿಬಿಎಂಪಿಯ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. 