ಬೆಂಗಳೂರು, ಆ.31: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ನಗರದ ವೈಟ್​​ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.'ಈಶ್ವರಪ್ಪ ಮುನಿಯಪ್ಪ' ಎಂಬ ಟ್ವಿಟರ್​ ಖಾತೆಯ ಮೂಲಕ ಆರೋಪಿಯು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ಜಿ. ಪರಮೇಶ್ವರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸುದ್ದಿಗಳಿಗೆ ಹಾಗೂ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಪೋಸ್ಟ್ ಗಳಿಗೆ  ಅವಾಚ್ಯವಾಗಿ ಸಾಲು ಸಾಲು ಪೋಸ್ಟ್ ಮಾಡಿದ್ದು, ಈ ಬಗ್ಗೆ ಗಮನಿಸಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಆರೋಪಿ ಪತ್ತೆಗೆ ಈಗಾಗಲೇ ತನಿಖೆ ಆರಂಭವಾಗಿದೆ ಎಂದು ಸೈಬರ್ ಕ್ರೈಂ ಪೊಲೀಸರು ತಿಳಿಸಿದ್ದಾರೆ.