ಕಾವ್ಯ ಬೆಂಗಳೂರು: 9 ವರ್ಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಕಾವ್ಯ ಎಂಬ ಹೆಸರಿನ ಶ್ವಾನ, ವಯೋಸಹಜ ಖಾಯಿಲೆಯಿಂದ ಸಾವನ್ನಪ್ಪಿದೆ.2014 ರಲ್ಲಿ ಜನಿಸಿದ್ದ ಕಾವ್ಯ, ಅದೇ ವರ್ಷ ಇಲಾಖೆಗೆ ಸೇರ್ಪಡೆಯಾಯಿತು. 9 ವರ್ಷ, 6 ತಿಂಗಳು ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕಾವ್ಯ, ಹಲವು ಬಾಂಬ್ ಪತ್ತೆ ಕಾರ್ಯಗಳಲ್ಲಿ ಭಾಗಿಯಾಗಿತ್ತು.ಗುರುವಾರ (ಆಗಸ್ಟ್ 31) ಶ್ವಾನ ಕಾವ್ಯಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಜತೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.