ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಯ ನರ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ಕೂಡಾ ಚುನಾವಣಾ ಸಮಯದಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು.