ಹುಬ್ಬಳ್ಳಿ: ಕೆಎಸ್ಸಾರ್ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ವ್ಯಕ್ತಿಯೋರ್ವ ಸ್ಥಳದಲ್ಲೇ  ಮೃತಪಟ್ಟ ಘಟನೆ ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಹತ್ತಿರ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಸೂರಪೂರ ತಾಲೂಕಿನ ದ್ಯಾವಾಪೂರ ಗ್ರಾಮದ ಕುಪ್ಪಣ್ಣಾ ಪಠಾದಾರ (40) ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರ ಕುಪ್ಪಣ್ಣಾ ನಿಯಂತ್ರಣ ತಪ್ಪಿ ಬಸ್ಸಿನ ಮುಂದಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.   ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  