ಮುಖ್ಯಮಂತ್ರಿಗಳು ಹಂಚಿಕೊಂಡ ಫೋಟೊ  ಬೆಂಗಳೂರು, ಆ. 26: ‘ಬದಲಾವಣೆ ಮೂಡಿಸಲು ನಾವು ಸಿದ್ಧರಿದ್ದೇವೆ. ನಮ್ಮ ಈ ಕಾರ್ಯಕ್ಕೆ ನಿಮ್ಮ ಸಹಕಾರವೂ ಇರಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್(ಎಕ್ಸ್ )ಮಾಡಿದ್ದು, ವಿದ್ಯುತ್ ಸಂಪರ್ಕವಿಲ್ಲದ ವೃದ್ದೆಯ ಮನೆಗೆ 24ಗಂಟೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ವಿಚಾರವನ್ನು ಹಂಚಿಕೊಂಡಿದ್ದಾರೆ.ಶನಿವಾರ ಟ್ವೀಟ್ ಮಾಡಿರುವ ಅವರು, ‘ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರವನ್ನು ಸ್ಥಳೀಯರಾದ ಮಹೇಂದ್ರ ಎಂಬವರು ನಮ್ಮ ಕಚೇರಿಯ ಗಮನಕ್ಕೆ ತಂದರು. ತಕ್ಷಣ ಅವರ ಮನವಿಗೆ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಆ ತಾಯಿಯ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ’ ಎಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.  